Ad Widget

ಗಟ್ಟಿಗಾರು ಶಾಲಾ ಮಕ್ಕಳಿಗೆ ಅಮರ ಸಂಘಟನಾ ಸಮಿತಿಯ ಆಶ್ರಯದಲ್ಲಿ ಉಚಿತ ಬ್ಯಾಗ್ ವಿತರಣೆ

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಗಟ್ಟಿಗಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಮಾರಂಭದ ಉದ್ಘಾಟನೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮೂಲೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಅಧ್ಯಕ್ಷ ಸಾತ್ವೀಕ್ ಮಡಪ್ಪಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ.ಕಿ.ಪ್ರಾ.ಶಾಲೆ ಗಟ್ಟಿಗಾರು ಇದರ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹರಿಪ್ರಸಾದ್ ಕೆ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಿತ್ರಾ ಬಿ ಎಸ್, ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಹರಿಪ್ರಸಾದ್ ಎಲಿಮಲೆ, ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್ ಇವರುಗಳು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಿಕ್ಷಕಿ ನಂದಿನಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು,ಪೊಷಕರು, ಊರಿನ ಹಿರಿಯರು, ಅಮರ ಸಂಘಟನಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading