ಸುಳ್ಯದ ಪ್ರತಿಷ್ಟಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಇಂದು ಗೌಡ ಸಮುದಾಯ ಭವನ ಕೊಡಿಯಾಲಬೈಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಾರ್ಷಿಕ ವರದಿ ವಾಚಿಸಿದರು.
ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ್ ಮಾತನಾಡಿ ನಮ್ಮ ಸಹಕಾರಿ ಸಂಘವು ಈ ವರ್ಷದಲ್ಲಿ ರೂ 2,01 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರುಗಳಿಗೆ ಶೇ.15 ಪರ್ಸೆಂಟ್ ಡಿವಿಡೆಂಡ್ ವಿತರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರುಗಳ ಮಕ್ಕಳಿಗೆ ವಿದ್ಯಾನಿಧಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಜಾಕೆ ಸದಾನಂದ, ಚಂದ್ರ ಕೋಲ್ಟಾರ್, ಪಿ.ಎಸ್.ಗಂಗಾಧರ, ಕೆ.ಸಿ. ನಾರಾಯಣ ಗೌಡ, ಕೆ.ಸಿ. ಸದಾನಂದ, ದಿನೇಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಶೈಲೇಶ್ ಅಂಬೆಕಲ್ಲು, ಹೇಮಚಂದ್ರ ಐ.ಕೆ., ನವೀನ್ ಕುಮಾರ್ ಜೆ.ವಿ., ಶ್ರೀಮತಿ ಜಯಲಲಿತಾ ಕೆ.ಎಸ್., ಶ್ರೀಮತಿ ಲತಾ ಎಸ್. ಮಾವಜಿ, ಶ್ರೀಮತಿ ನಳಿನಿ ಸೂರಯ್ಯ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ., ಸಹಾಯಕ ಪ್ರಧಾನ ವ್ಯವಸ್ಥಾಪಕ ಮನೋಜ್ ಕುಮಾರ್ ಪಿ. ಉಪಸ್ಥಿತರಿದ್ದರು. ಸಭೆಯಲ್ಲಿ ಎಲ್ಲಾ ಶಾಖೆಗಳ ಸಿಇಓ, ಸಿಬ್ಬಂದಿಗಳು, ಹಾಗೂ ಸಂಘದ ಸದಸ್ಯರುಗಳು ಭಾಗವಹಿಸಿದ್ದರು. ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಂದಿಸಿದರು.