ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ ಸಂಘದ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಡೆಸುವ ಬಗ್ಗೆ ಗ್ರಾಮ ಆಡಳಿತಾಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ಮನವಿ ಪತ್ರವನ್ನು ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು.
ತಮ್ಮ ಮನವಿ ಪತ್ರದಲ್ಲಿ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿದ್ದು ಈ ಬೇಡಿಕೆಗಳು ಈಡೇರುವವರೆಗೆ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಸಂಘ ಆಗ್ರಹಿಸಿದೆ.
- Sunday
- November 24th, 2024