ಜೆ.ಡಿ.ಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ನೀಡಿದರು..
ದಂಪತಿ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು ಬಳಿಕ ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ ಕಾರ್ಯಕರ್ತರನ್ನು ಹುರಿ ದುಂಬಿಸುವ ಕೆಲಸ ಮಾಡುತಿದ್ದೇವೆ. ಯಾವುದೇ ಚುನಾವಣೆ ಇರಲಿ ಪಕ್ಷದ ಸಂಘಟನೆಗೆ ಒತ್ತನ್ನು ಕೊಡುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ , ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಒಕ್ಕಲಿಗ ಗೌಡ ಮುಖಂಡರುಗಳಾದ ಸಂತೋಷ್ ಜಾಕೆ, ಗೋಪಾಲ ಎಣ್ಣೆ ಮಜಲ್, ಶಿವರಾಮ ಏನೆಕಲ್, ಸುಬ್ರಮಣ್ಯ ಗೌಡ ಗ್ರಾಮ ಸಮಿತಿ ಅಧ್ಯಕ್ಷ ಡಾ| ಎ. ಎ. ತಿಲಕ್, ಕಾರ್ಯದರ್ಶಿ ವಿಶ್ವನಾಥ ನಡುತೋಟ, ಉಪಾಧ್ಯಕ್ಷ ನಾರಾಯಣ ಅಗ್ರಹಾರ, ಪೂರ್ವ ಅಧ್ಯಕ್ಷ ಲೊಕೇಶ ಬಿ.ಎನ್, ಜಯರಾಮ ಕಟ್ಟೆಮನೆ, ಮತ್ತಿತರರು ಹಾಜರಿದ್ದರು.