ಕಲ್ಮಡ್ಕ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಸಪ್ತ ಗೊಂಚಲು ಸಮಿತಿ ಕಲ್ಮಡ್ಕ ಗ್ರಾಮ ಪಂಚಾಯಿತ್ ಕಲ್ಮಡ್ಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಶಿವಗೌರಿ ಸಭಾಂಗಣ ಪಡ್ಪಿನಂಗಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಡಾ ಮಂಜುನಾಥ ಆರೋಗ್ಯ ದ ಬಗ್ಗೆ ಮಾಹಿತಿ ನೀಡಿದರು.
ಪೌಷ್ಟಿಕ ಆಹಾರ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಆರು ತಿಂಗಳು ತುಂಬಿದ ಮಗುವಿಗೆ ಅನ್ನ ಪ್ರಾಶನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು, ಪೋಷಣ್ ಅಭಿಯಾನ ಸಂಯೋಜಕರು, ಕಚೇರಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು, ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಪ್ರಾರ್ಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.
ನಿವೃತ್ತಿ ಹೊಂದಿದ ಪಡ್ಪಿನಂಗಡಿ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಅವರಿಗೆ ಬೀಳ್ಕೋಡುಗೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಪ್ರಾಸ್ತಾವಿಕ ಮಾತನಾಡಿದರು.
ಪುಪ್ಪಾವತಿ ಪಂಬೆತ್ತಾಡಿ ಪ್ರಾರ್ಥಿಸಿ,ಮಮತಾ ನಡ್ಕ ಸ್ವಾಗತಿಸಿ ಮಮತಾ ಧನ್ಯವಾದ ಸಮರ್ಪಿದರು. ಧನ್ಯ ಕಾರ್ಯಕ್ರಮ ನಿರೂಪಿಸಿದರು.