ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಕಣಕ್ಕಿಳಿಸಲಾಗಿದೆ.
ಪುತ್ತೂರಿನವರಾಗಿರುವ ಕಿಶೋರ್ ಕುಮಾರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.