ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ 155ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗಾಂಧಿ ಮತ್ತು ಅಹಿಂಸಾ ತತ್ವ ಎಂಬ ವಿಷಯದ ಬಗ್ಗೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕಾಂತರಾಜ್ ಸಿ.ಉಪನ್ಯಾಸ ನೀಡಿದರು. ಗೈಡ್ಸ್ ಗಳಾದ ರಾಜೇಶ್ವರಿ ರೈ ಮತ್ತು ಹರ್ಷಿಣಿ ಗಾಂಧೀಜಿಯವರ ಜೀವನ ಆದರ್ಶಗಳ ಬಗ್ಗೆ ಮಾತನಾಡಿದರು. ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಂತಿಕಲ್ಲು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಚಿದಾನಂದ ರೈ ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳ ಶಿಸ್ತು ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಮೇದಪ್ಪ ಗೌಡ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರಾದ ಶ್ರೀ ಟೈಟಸ್ ವರ್ಗೀಸ್, ಸ್ಕೌಟ್ಸ್ ಮಾಸ್ಟರ್ ಶ್ರೀ ಲಿಂಗಪ್ಪ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಾಂಧಿ ಜಯಂತಿ ಅಂಗವಾಗಿ ನಡೆದ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗೈಡ್ ವಿದ್ಯಾರ್ಥಿ ಪೂಜಾ ಅತಿಥಿಗಳನ್ನು ಸ್ವಾಗತಿಸಿದರು. ಸ್ಕೌಟ್ ವಿದ್ಯಾರ್ಥಿ ಮಿಥುನ್ ನಾಯ್ಕ್ ವಂದಿಸಿದರು. ಗೈಡ್ ವಿದ್ಯಾರ್ಥಿ ಸೌಮ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
- Friday
- November 1st, 2024