Ad Widget

ಸರ್ಕಾರಿ ನೌಕರರ ಸಂಘದ ಚುನಾವಣೆ : ನಾಳೆ (ಅ.9)ಯಿಂದ ನಾಮಪತ್ರ ಸಲ್ಲಿಕೆ ಆರಂಭ

2024-2029ನೇ ಅವಧಿಯ ಸುಳ್ಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

. . . . . . . . .

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ತಾಲೂಕು ಚುನಾವಣಾಧಿಕಾರಿಯಾದ ಅಚ್ಚುತ ಪಿ ಇವರ ಸೂಚನೆಯಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಸುಳ್ಯ ತಾಲ್ಲೂಕು ಶಾಖೆಯ ನಿರ್ದೇಶಕರು & ಪದಾಧಿಕಾರಿಗಳ ಚುನಾವಣೆಗಳನ್ನು ಸುಳ್ಯ ತಾಲೂಕು ಶಾಖೆ ನಿಗದಿಪಡಿಸಿದ ಸ್ಥಳದಲ್ಲಿ ಈ ಕೆಳಕಂಡ ದಿನಾಂಕಗಳಂತೆ ತಾಲೂಕು ಶಾಖೆಯ ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದೆ.
ಅ.೯ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು ಬೆಳಗ್ಗೆ ೧೧ ಗಂಟೆಯಿಂದ ಸಂಜೆ ೫ ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಅ.೧೮ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅ.೧೯ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಂದೇ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುತ್ತದೆ. ಅ.೨೧ರಂದು ನಾಮಪತ್ರ ವಾಪಸು ಪಡೆಯಲು ಅವಕಾಶ ನೀಡಲಾಗಿದೆ. ಅಂದೇ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಅ.೨೮ರಂದು ಚುನಾವಣೆ ನಡೆಯಲಿದೆ. ಸಂಜೆ ೪ ಗಂಟೆ ಗೆ ಮತದಾನ ಮುಗಿಯಲಿದ್ದು, ಬಳಿಕ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಘೋಷಣೆ ಯಾಗಲಿದೆ ಎಂದು ಚುನಾವಣಾಧಿಕಾರಿ‌ ಅಚ್ಯುತ‌ರವರು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading