Ad Widget

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಡಾ. ಅನುರಾಧಾ ಕುರುಂಜಿ

ಅಧಿಕಾರ ಸ್ವೀಕಾರ ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ 2012-22ರವರೆಗೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವನ್ನು ಮುನ್ನಡೆಸಿ 2019 ರಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಕೊಡ ಮಾಡಿದ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ಪ್ರಶಸ್ತಿ ಸ್ವೀಕರಿಸಿದುದಲ್ಲದೇ 2022 ರಲ್ಲಿ ಎರಡನೇ ಬಾರಿಗೆ ಮಂಗಳೂರು ವಿಶ್ವ ವಿದ್ಯಾಲಯದ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ಅತ್ಯುತ್ತಮ ಘಟಕ ಪ್ರಶಸ್ತಿ ಸ್ವೀಕರಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದುದಲ್ಲದೇ ನಿರಂತರವಾಗಿ 300 ಕ್ಕೂ ಅಧಿಕ ವಿದ್ಯಾರ್ಥಿ ಕೇಂದ್ರಿತ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ 2018 ರಲ್ಲಿ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಂಸ್ಥೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಲೀಡ್ ಕಾಲೇಜು ಎಂಬ ಪ್ರಶಂಸೆಗೆ ಪಾತ್ರವಾಗುವಲ್ಲಿ ಶ್ರಮ ವಹಿಸಿದವರು. ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿ ಕಾಲೇಜು ಜೀವನದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕಿಯಾಗಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಹಾಗೂ ನವದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಎರಡೂ ಹಂತದ ಗಣರಾಜ್ಯೋತ್ಸವ (ಆರ್ ಡಿ ಪೆರೇಡ್) ಪಥಸಂಚಲನದಲ್ಲಿ ಭಾಗವಹಿಸಿ ಶಾಶ್ವತ ದಾಖಲೆ ನಿರ್ಮಿಸಿದ ಡಾ ಅನುರಾಧಾ ಕುರುಂಜಿಯವರಿಗೆ 2024 -25 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಮತ್ತೆ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಯಾಗಿ

. . . . . .

ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ಅಧಿಕಾರ ವಹಿಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ, ಕಛೇರಿ ಅಧೀಕ್ಷಕಿ ನಿವೇದಿತಾ ಎಂ, ಉಪನ್ಯಾಸಕರಾದ ಸಂಜೀವ ಕುದ್ಪಾಜೆ, ಶ್ರೀಮತಿ ಚಿತ್ರಲೇಖಾ ಕೆ ಎಸ್, ಕಛೇರಿ ಸಿಬ್ಬಂದಿ ಪವನ್ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!