ಬೈಕ್ ನ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಮೆಸ್ಕಾಂ ಸಿಬ್ಬಂದಿ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪಾಲಡ್ಕ ಸಮೀಪ ಅ.20ರಂದು ಅಪರಾಹ್ನ ಸಂಭವಿಸಿದೆ.
ಸುಳ್ಯದ ಮೆಸ್ಕಾಂ ನಲ್ಲಿ ಮೀಟರ್ ರೀಡರ್ ಆಗಿರುವ ಜಯಪ್ರಕಾಶ್ ಕಜ್ಜೋಡಿ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಅಪಾಯದಿಂದ ಪಾರಾಗಿದ್ದು, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ.