ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗ ರಸ್ತೆ ಕೆಟ್ಟು ಹೋಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನ ಸೆಳೆದರೂ, ಪ್ರತಿಭಟನೆ ನಡೆಸಿದರೂ ರಸ್ತೆ ಸಂಪೂರ್ಣ ದುರಸ್ತಿಯಾಗದೇ ಉಳಿದಿತ್ತು. ಇದರಿಂದ ನೊಂದ ದೇರಾಜೆ ಗೆಳೆಯರ ಬಳಗ ಸದಸ್ಯರು ಮತ್ತು ಸಾರ್ವಜನಿಕರ ಸಹಕಾರ ಪಡೆದು ದೇವಸ್ಥಾನ ಮುಂಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಗೊಳಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Sunday
- November 24th, 2024