ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ಡಾ. ಮಮತಾ ಕೆ ಕಾಲೇಜಿನ ಬೋಧಕ- ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕನ್ನಡದ ಮಹಾನ್ ಕವಿಗಳು ವಿರಚಿತ ಕನ್ನಡದ ಪಂಚ ಗೀತೆಗಳನ್ನು ಗಾಯನ ಮಾಡಿದರು
- Tuesday
- December 3rd, 2024