Ad Widget

ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರಥಮ ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ೩೪ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು.
ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

. . . . . . .


ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿ ಇದರ ಗೌರವಾನ್ವಿತ ಸದಸ್ಯರಾದ ಡಾ. ಶಿವಶರಣ್ ಶೆಟ್ಟಿ ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ ವಿದ್ಯಾರ್ಥಿಗಳ ವೈದ್ಯಕೀಯ ಸೇವೆ ಪ್ರತಿ ಭಾಗದ ಜನರಿಗೆ ಸಿಗುವಂತಾಗಲಿ ಎಂದು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು ಹಾಗೂ ರ‍್ಯಾಗಿಂಗ್ ನಿವಾರಣೆ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಮಾತನಾಡಿ ಕಾಲೇಜಿನ ಎಲ್ಲಾ ಆಧುನಿಕ ವೈದ್ಯಕೀಯ ಪರಿಕರಗಳು ನಮ್ಮಲ್ಲಿದೆ, ಶಿಕ್ಷಣದ ಜೊತೆಗೆ ಕಲಿಕೆಯ ಭಾಗವಾಗಿ ಇದರ ಸದುಪಯೋಗವನ್ನು ಪ್ರತಿ ವಿದ್ಯಾರ್ಥಿಗಳು ಪಡೆಯುವಂತಾಗಲಿ ಎಂದು ಸ್ವಾಗತಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್ ಪ್ರಸಾದ್ ಇವರು ಮಾತನಾಡಿ ನೀವೆಲ್ಲರೂ ನಿಷ್ಕಲ್ಮಶ ಮನಸ್ಸಿನಿಂದ ಶಿಕ್ಷಣ ಪಡೆಯುವುದರ ಜೊತೆಗೆ ಸೇವೆ ಮಾಡಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಡಾ. ಶಿವಶರಣ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ಇವರ ಪರಿಚಯವನ್ನು ಡಾ. ದಯಾಕರ್ ಎಂ ಎಂ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುಳ್ಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಹಾಗೂ ಕಾನೂನು ಸಲಹೆಗಾರರಾದ ದೀಪಕ್ ಕುತ್ತಮೊಟ್ಟೆ ಉಪಸ್ಥಿತರಿದ್ದು ಸಂಸ್ಥೆಯ ವತಿಯಿಂದ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿದ ಕಾಲೇಜಿನ ಅನಾಟಮಿ ವಿಭಾಗವನ್ನು ಡಾ. ಶಿವಶರಣ್ ಶೆಟ್ಟಿ ಹಾಗೂ ಡಿಸೆಕ್ಷನ್ ವಿಭಾಗವನ್ನು ಮೌರ್ಯ ಆರ್ ಪ್ರಸಾದ್ ಅವರು ಉದ್ಘಾಟಿಸಿದರು.
ಆರಂಭದಲ್ಲಿ ಪ್ರಾರ್ಥನೆಯನ್ನು ಡಾ. ಭೂಮಿಕಾ ಆರ್ ಶೆಟ್ಟಿ ನೆರವೇರಿಸಿದರು ಹಾಗೂ ಕೊನೆಯಲ್ಲಿ ಉಪ ಪ್ರಾಂಶುಪಾಲೆ ಡಾ. ಶೈಲಾ ಪೈ ವಂದಣಾರ್ಪಣೆಗೈದರು.
ಕಾರ್ಯಕ್ರವನ್ನು ಅನ್ಸಿಲಾ ರಾಗೇಶ್, ಕಾರ್ಲಿನ್ ರೆನಿ ಕಾರ್ಡೋಜಾ ನಿರೂಪಿಸಿದರು. ಈ ಕಾರ್ಯಕ್ರಮವನ್ನು ಮಾಧವ ಬಿ ಟಿ ರವರು ನಿರ್ವಹಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಭೋಧಕ ಭೋಧಕೇತರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಲ್ಲಾ ನೂತನ ವಿದ್ಯಾರ್ಥಿಗಳಿಗೆ ಹೂಗುಚ್ಚ ಹಾಗೂ ವೈದ್ಯಕೀಯ ಸಮವಸ್ತ್ರ ನೀಡಿ ಸ್ವಾಗತಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!