Ad Widget

ನ.10-ಮಡಿಕೇರಿಯ ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಡಿಕೇರಿಯ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ವು ನ.10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.ನಗರದ ಅಕಾಡೆಮಿ ಕಚೇರಿಯಲ್ಲಿ ನ.7ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.ನವೆಂಬರ್ 10 ರಂದು ಬೆಳಗ್ಗೆ 8.30 ಗಂಟೆಗೆ ಕಡಂಗ ಗಣಪತಿ ದೇವಸ್ಥಾನದ ಎದುರಿನಲ್ಲಿ ಮ್ಯಾರಥಾನ್‌ಗೆ ಚಾಲನೆ ನೀಡುವ ಮೂಲಕ ಉತ್ಸವ ಆರಂಭಗೊಳ್ಳಿದೆ ಎಂದರು.ನಂತರ ಬೆಳಗ್ಗೆ 9.30 ಗಂಟೆಗೆ ಧ್ವಜಾರೋಹಣ ಮತ್ತು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ನರಿಯಂದಡ ಗ್ರಾ.ಪಂ.ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ, ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ, ಯವಕಪಾಡಿ ನಿವೃತ್ತ ಶಿಕ್ಷಕರಾದ ಮಂಞಂಡ್ರ ರೇಖಾ ಉಲ್ಲಾಸ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.ಬಳಿಕ ಬೆಳಗ್ಗೆ 10 ಗಂಟೆಗೆ ವಿವಿಧ ಕ್ರೀಡಾಕೂಟ ಮತ್ತು ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಗಂಟೆ 1.30 ಕ್ಕೆ ಚೆಯ್ಯಂಡಾಣೆ ಮುಖ್ಯರಸ್ತೆಯಿಂದ ಶಾಲೆವರೆಗೆ ಸಾಂಸ್ಕಂತಿಕ ಮೆರವಣಿಗೆ ನಡೆಯಲಿದೆ. ಆಕರ್ಷಕ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಕಲಾಪ್ರಕಾರಗಳ ಪ್ರದರ್ಶನ ಜರುಗಲಿದೆ ಎಂದು ಸದಾನಂದ ಮಾವಜಿ ಅವರು ನುಡಿದರು.ಜರುಗಲಿದೆ ಎಂದು ಸದಾನಂದ ಮಾವಜಿ ಅವರು ನುಡಿದರು.ಮಧ್ಯಾಹ್ನ 2 ಗಂಟೆಗೆ ವಿಶೇಷ ಆಕರ್ಷಣೆ ಪುರುಷರ ಹಗ್ಗಜಗ್ಗಾಟದ ಅಂತಿಮ ಪಂದ್ಯಾಟ ನಡೆಯಲಿದೆ. ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಅರೆಭಾಷೆ ಕುರಿತು ಉಪನ್ಯಾಸ, ಹಿರಿಯ ಸಾಧಕರಿಗೆ ಸನ್ಮಾನ, ಬಹುಮಾನಗಳ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ವಿವರಿಸಿದರು.ಮಧ್ಯಾಹ್ನ 3.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕಂತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್‌.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಕರ್ನಾಟಕ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಬಹುಮಾನ ವಿತರಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಕೊಟ್ಟಕೇರಿಯನ ದಯಾನಂದ ಸಮಾರೋಪ ಕುರಿತು ಭಾಷಣ ಮಾಡಲಿದ್ದಾರೆ. ಪಾರಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ತೋಟಂಬೈಲು ಮನೋಹ‌ರ್, ಚೆಯ್ಯಂಡಾಣೆ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ.ಮಾಜಿ ಸದಸ್ಯರಾದ ಗೌಡುಧಾರೆ ಚೋಟು ಬಿದ್ದಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.’ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ದಶವರ್ಷ ಸಂಭ್ರಮದ ಸ್ಮರಣಾರ್ಥ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅರೆಭಾಷಿಕರು ಇರುವ ಗಡಿಪ್ರದೇಶಗಳಲ್ಲಿ ಅರೆಭಾಷಿಕರ ಬಾಂಧವ್ಯವನ್ನು ವೃದ್ಧಿಸಿ ಅರೆಭಾಷೆಯನ್ನು ಮತ್ತಷ್ಟು ಬೆಳೆಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅರೆಭಾಷೆ ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸದಾನಂದ ಮಾವಜಿ ಈ ನುಡಿದರು.ಚೆಯ್ಯಂಡಾಣೆಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವವು ಎರಡನೆಯ ಕಾರ್ಯಕ್ರಮವಾಗಿದ್ದು, ಮೊದಲ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಬಂದಡ್ಕ ಗ್ರಾಮದಲ್ಲಿ ಅಕ್ಟೋಬರ್ 27 ರಂದು ಬಹಳ ಅದ್ಧೂರಿಯಾಗಿ ಮತ್ತು ಯಶಸ್ವಿಯಾಗಿ ನಡೆದಿರುವುದು ವಿಶೇಷ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಮೂರನೇ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಮಂಡೆಕೋಲು ಗ್ರಾಮದಲ್ಲಿ ಡಿಸೆಂಬರ್ 1 ರಂದು ನಡೆಯಲಿದೆ. ಉಳಿದಂತೆ ಕೊಡಗಿನ ಭಾಗಮಂಡಲ ಹಾಗೂ ಕುಶಾಲನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ನಡೆಯಲಿವೆ ಎಂದರು.ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದಹರಿಪ್ರಸಾದ್ ಬೆಳಿಯಂಡ್ರ ಅವರು ಮಾತನಾಡಿಕರ್ನಾಟಕ ಅರೆಭಾಷೆ ಸಂಸ್ಕಂತಿ ಮತ್ತು ಸಾಹಿತ್ಯಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡಅಯ್ಯಪ್ಪ ಯುವಕ ಸಂಘ ಸಹಕಾರದಲ್ಲಿನಡೆಯುತ್ತಿರುವ ಅರೆಭಾಷೆ ಉತ್ಸವಕ್ಕೆ ಒಂದುಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆಎಂದು ಅವರು ತಿಳಿಸಿದರು.ಗಡಿನಾಡ ಉತ್ಸವ ಅಂಗವಾಗಿ ನಡೆಯುವ ಆಟೋಟಗಳಲ್ಲಿ ಗುಡ್ಡಗಾಡು ಓಟ, 5 ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, 5 ರಿಂದ 10 ವರ್ಷದೊಳಗಿನ ಮಕ್ಕಳಿಗೆ 50 ಮೀಟರ್ ಓಟ, 10 ರಿಂದ 15 ವರ್ಷದೊಳಗಿನ ಮಕ್ಕಳಿಗೆ 100 ಮೀಟರ್ ಓಟ, ಪುರುಷರಿಗೆ ಬಾರದ ಗುಂಡು ಎಸೆತ, 60 ವರ್ಷ ಮೇಲ್ಪಟ್ಟವರಿಗೆ 75 ಮೀಟರ್ ಓಟ, 15 ರಿಂದ 20 ವರ್ಷದೊಳಗಿನ ಯುವಕರಿಗೆ 200 ಮೀಟರ್ ಓಟ , 20 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪಾಸ್ ಇನ್ ದ ಬಾಲ್, ಬಾಂಬ್‌ ಇನ್‌ ಸಿಟಿ ಆಟ ನಡೆಯಲಿದ್ದು, ಹಗ್ಗ ಜಗ್ಗಾಟ, ಊರಿನವರಿಗೆ ಸೋಬಾನೆ ಹೇಳುವ ಸ್ಪರ್ಧೆ ನಡೆಯಲಿದೆ. ಈ ಆಟೋಟಗಳಲ್ಲಿ ಕೆದಮುಳ್ಳೂರು, ಕೊಡಂಜಗೇರಿ, ನರಿಯಂದಡ, ಕಕ್ಕಬ್ಬೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅರೆಭಾಷಿಕರು ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.ನರಿಯಂದಡ ಅಯ್ಯಪ್ಪ ಯುವಕ ಸಂಘದ ಗೌರವ ಅಧ್ಯಕ್ಷರಾದ ತೋಟಂಬೈಲು ಅನಂತಕುಮಾ‌ರ್ ಅವರು ಅ ರೆಭಾಷೆ ಗಡಿನಾಡ ಉತ್ಸವ ಸಿದ್ಧತೆ ಬಗ್ಗೆ ವಿವರಿಸಿದರು. ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ವಿನೋದ್ ಮೂಡಗದ್ದೆ ಸುದ್ದಿಗೋಷ್ಠಿಯಲ್ಲಿ ಇದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!