ನ.15ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಹೋರಾಟಕ್ಕೆ ಬೆಳ್ತಂಗಡಿಯ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ) ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ ಎಂದು ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ಧೇಶಕ ವಂ. ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದ್ದಾರೆ.
- Thursday
- November 14th, 2024