ಸಹಕಾರಿ ಸಂಘಗಳ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಪಿ. ಸಿ ಜಯರಾಂ ನೇತ್ರತ್ವದಲ್ಲಿ ಕಾರ್ಯಕರ್ತರ ಸಭೆ ಇಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಮಹತ್ವಪೂರ್ಣ ಚರ್ಚೆ ನಡೆಸಲಾಯಿತು ಮತ್ತು ತಾಲ್ಲೋಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ ಚುನಾವಣೆಗಾಗಿ ಉಸ್ತುವಾರಿಗಳನ್ನಾಗಿ ಸರ್ವಾನುಮತದಿಂದ ಆಯ್ಕೆ ನಡೆಸಲಾಯಿತು.

. . . . . . . . .

. . . . . . .

ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ  ಟಿ.ಎಂ ಶಹೀದ್ ತೆಕ್ಕಿಲ್, ಮಾಜಿ ಕೆಪಿಸಿಸಿ ಕಾರ್ಯದರ್ಶಿಗಳಾದ  ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯರಾದ ಶ್ರೀಮತಿ ಸರಸ್ವತಿ ಕಾಮತ್, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್ ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಕಲ್ಮಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ  ಮಹೇಶ್ ಕುಮಾರ್ ಕರಿಕ್ಕಳ, ಜಿಲ್ಲಾ ಎಸ್ ಟಿ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ,ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಮತಿ ಗೀತಾ ಕೋಲ್ಚಾರು, ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಸುರೇಶ್ ಅಮೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ  ಅನಿಲ್ ರೈ ಬೆಳ್ಳಾರೆ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಕೊಯಿಕುಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ  ಗಂಗಾಧರ ಪಿ.ಎಸ್, ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ಶ್ರೀಮತಿ ಸುಜಯಕೃಷ್ಣ , ಪ್ರವೀಣಾ ರೈ ಮರುವಂಜ, ಅಜ್ಜಾವರ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಲೀಲಾ ಮನಮೋಹನ್, ಆಲೆಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ್ ಗರೋಡಿ, ಮಹೇಶ್ ಬೆಳ್ಳಾರ್ಕರ್, ಕೇಶವ್ ಮೊರಂಗಲ್ಲು, ರವಿಕುಮಾರ್ ಕಿರಿಭಾಗ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ನೆಲ್ಲಿಕುಮೇರಿ, ಸುಳ್ಯ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೋ, ಜಿ.ಕೆ ಹಮೀದ್, ವಿಶ್ವನಾಥ ರೈ ಕಳಂಜ, ದಿನೇಶ್ ಸರಸ್ವತಿಮಹಲ್, ವಿನೂಪ್ ಮಲ್ಲಾರ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ರಾಧಾಕೃಷ್ಣ ಪರಿವಾರಕಾನ, ತೀರ್ಥರಾಮ ಜಾಲ್ಸೂರು, ಯಶೋಧರ ಬಾಕಿಲ, ದಯಾನಂದ ಕಟ್ಟೆಮನೆ, ಯೂಸುಫ್ ಅಂಜಿಕಾರ್, ಅಬ್ಬಾಸ್ ಅಜ್ಜಾವರ, ಚೇತನ್ ಕಜೆಗದ್ದೆ ಮತ್ತು ಪಕ್ಷದ ಮುಂಚೂಣಿ ಘಟಕಗಳ ಮುಖಂಡರುಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading