
ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನ. 15 ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಪ್ರತಿಭಟನೆ ಪರಿಣಾಮಕಾರಿಯಾಗಲು ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹಾಗೂ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ರೈತ ಪರ ಹೋರಾಟದಲ್ಲಿ ಕೈಜೋಡಿಸಬೇಕೆಂದು ಮಲೆನಾಡು ಜನ ಹಿತ ರಕ್ಷಣವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಮನವಿ ಮಾಡಿದ್ದಾರೆ.
