ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.
- Friday
- November 22nd, 2024