ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳು ಗಾಯಗೊಂಡರೆನ್ನಲಾಗಿದೆ.
ಸಂಪಾಜೆಯ ತಾಜುದ್ದೀನ್ ಟರ್ಲಿ ಅವರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದು, ಗಂಬೀರ ಗಾಯಗೊಂಡ ಒರ್ವನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.