Ad Widget

ಹರಿಹರ ಪಳ್ಳತ್ತಡ್ಕ : ನ.24 ರಂದು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಸಮಾರಂಭ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ(ರಿ.) ಸುಳ್ಯ 2024, ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ,  ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ(ರಿ.) ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು ಮತ್ತು ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ “ಆಧುನಿಕ ಸುಳ್ಯದ ನಿರ್ಮಾತೃ ಡಾ| ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತೋತ್ಸವದ ಸವಿನೆನಪಿಗಾಗಿ” ನವೆಂಬರ್ 24 ಆದಿತ್ಯವಾರದಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:30 ರವರೆಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಸಮಾರಂಭ” ನಡೆಯಲಿದ್ದು, ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ.ವಿ ಚಿದಾನಂದ ರವರು ಶಿಬಿರವನ್ನು ಉದ್ಘಾಟಿಸಲಿದ್ದು, ಕೆ.ವಿ.ಜಿ ಸುಳ್ಯ ಹಬ್ಬ ಸೇವಾ ಸಂಘ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಎನ್.ಎ ಜ್ಞಾನೇಶ್ ರವರು ಶಿಬಿರದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹರಿಹರ ಪಳ್ಳತ್ತಡ್ಕದ ಹಿರಿಯ ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ ರವರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಹರ್ಷಕುಮಾರ್.ಡಿ.ಯಸ್ ರವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಶಿಬಿರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading