
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಜಯಶ್ರೀ ಶಿವರಾಮ ಚಾಂತಾಳ ನ.11 ರಂದು ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ನಿರ್ಧಾರದಂತೆ ಅಧ್ಯಕ್ಷ ಸ್ಥಾನಕ್ಕೆ ಒಂದು ಕಾಲು ವರ್ಷ ಜಯಶ್ರೀ ಚಾಂತಾಳ ಹಾಗೂ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನ ಮೋಹಿನಿ ಯವರಿಗೆ ನೀಡುವುದೆಂದು ತೀರ್ಮಾನವಾಗಿತ್ತು. ಈ ಹಿನ್ನೆಲೆಯಲ್ಲಿ ಜಯಶ್ರೀ ಯವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
