ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ. ವಕೀಲರಾಗಿದ್ದು, ಕೊಲ್ಲಮೊಗ್ರ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಕಳೆದ 9 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೂ ರೈತ ಹಿತರಕ್ಷಣಾ ವೇದಿಕೆ ಕೊಲ್ಲಮೊಗ್ರ ಇದರ ಪ್ರ.ಕಾರ್ಯದರ್ಶಿ ಯಾಗಿದ್ದಾರೆ.ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.