Ad Widget

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮುಗಿಯದ ಗೋಳು – ಆಂಬ್ಯುಲೆನ್ಸ್ ಚಾಲಕರಿಂದ ಬೇಸರ

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇದೆ.

. . . . .

ನ 17 ರಂದು ಸಂಜೆ ಕಲ್ಲುಗುಂಡಿ ಸಮೀಪ ವಾಹನ ಅಪಘಾತವಾಗಿದ್ದು ಅದರಲ್ಲಿದ್ದ ಓರ್ವ ಗಾಯಾಳುವನ್ನು ಆಂಬುಲೆನ್ಸ್‌ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿತ್ತು.

ಕಾರು ಆಸ್ಪತ್ರೆಗೆ ಬರುತ್ತಿದ್ದಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗ ಇರುವ ಜಾಗದಲ್ಲಿ ವೈದ್ಯರೊಬ್ಬರ ಕಾರು ನಿಲ್ಲಿಸಿದ್ದು ಈ ವೇಳೆ ಮಳೆ ಜೋರಾಗಿ ಬರುತಿದ್ದು ಗಾಯಳುವನ್ನು ಇಳಿಸಲು ಜಾಗವಿಲ್ಲದ ಪರಿಸ್ಥಿತಿ ಉಂಟಾಗಿದೆ.

ಈ ವೇಳೆ ಕಾರನ್ನು ತೆಗೆಯಲು ಆಂಬುಲೆನ್ಸ್‌ ಚಾಲಕ ಮನವಿ ಮಾಡಿದಾಗ ವೈದ್ಯರು ಮುನಿಸಿಕೊಂಡ ಘಟನೆ ನಡೆದಿದೆ. ಬಳಿಕ ಆಂಬುಲೆನ್ಸ್ ಚಾಲಕ ಮತ್ತು ವೈದ್ಯರ ನಡುವೆ ಅಲ್ಪ ಸ್ವಲ್ಪ ಮಾತುಗಳು ನಡೆದು ಕಾರಿನಳಿನಲ್ಲಿದ್ದ ಗಾಯಳುವನ್ನು ಮಳೆಯ ಮಧ್ಯೆಯೇ ಹೊರಗೆ ಇಳಿಸಿ ಟ್ರಾಲಿಯಲ್ಲಿ ಅವರನ್ನು ಆಸ್ಪತ್ರೆ ಒಳಗೆ ಕೊಂಡೊಯ್ಯುವ ಪರಿಸ್ಥಿತಿ ಉಂಟಾಯಿತು.

ಈ ಘಟನೆ ಬಗ್ಗೆ ಆಂಬುಲೆನ್ಸ್‌ ಚಾಲಕ ಮಾಲಕ ಸಂಘಟನೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ನಾವು ರೋಗಿಗಳನ್ನು, ಅಥವಾ ಗಾಯಳುಗಳನ್ನು ದೂರ ದೂರದಿಂದ ತರುತ್ತೇವೆ. ಆದರೆ ಆಸ್ಪತ್ರೆಗೆ ಬಂದಾಗ ಮಾನವೀಯತೆ ಇಲ್ಲದಂತೆ ವರ್ತಿಸಿದಾಗ, ಇಲ್ಲಿಯ ಅವ್ಯವಸ್ಥೆಯನ್ನು ಕಂಡಾಗ ತುಂಬಾ ನೋವಾಗುತ್ತೆ. ಈ ವೇಳೆ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡುವ ಸನ್ನಿವೇಶ ನಿರ್ಮಾಣವಾಗುತ್ತದೆ ಎಂದು ಹೇಳುತ್ತಿದ್ದು ಇದನ್ನು ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವರೇ ಎಂದು ಕಾದು ನೋಡಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!