Ad Widget

ಒಸಾಟ್ ಸಂಸ್ಥೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಸುಳ್ಯ ಸ.ಪ.ಪೂ. ಕಾಲೇಜು ಕೊಠಡಿ ಮತ್ತು ನೂತನ ಸಭಾಭವನಕ್ಕೆ ಶಿಲಾನ್ಯಾಸ

ಸಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಅಮೇರಿಕಾದ ಒಸಾಟ್ ಸಂಸ್ಥೆ ವತಿಯಿಂದ ರೂ.1 ಕೋಟಿ ವೆಚ್ಚದಲ್ಲಿ ನಾಲ್ಕು ಕೊಠಡಿ ನಿರ್ಮಾಣವಾಗಲಿದ್ದು, ಅದರ ಶಿಲಾನ್ಯಾಸ ಕಾರ್ಯಕ್ರಮ ನ.20ರಂದು ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಪುರೋಹಿತ ನಾಗರಾಜ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಕಾಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್, ಜನಾರ್ದನ ಮಾಸ್ಟರ್ ಗಣಿತ ಸಂಘದ ಅಧ್ಯಕ್ಷ ಎಂ.ಬಿ.ಸದಾಶಿವ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಸುಳ್ಯ ತಾ.ಪಂ. ಇ.ಒ. ರಾಜಣ್ಣ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ದಾನಿಗಳಾದ ಶ್ರೀಮತಿ ಸಂಧ್ಯಾ ಮತ್ತು ಗುರು ಪಾಂಗಾಳ, ಒಸಾಟ್ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟ್ ವಾದಿರಾಜ ಭಟ್‌, ಒಸಾಟ್‌ ಸಮಿತಿ ಸದಸ್ಯ ಮತ್ತು ಜೂನಿಯರ್ ಕಾಲೇಜು ಸಂಪರ್ಕ ಸೇತುವಾದ ಎಸ್.ಬಾಲಕೃಷ್ಣ, ಒಸಾಟ್ ಸಂಸ್ಥೆಯ ಕಿಶೋ‌ರ್ ಕುಮಾ‌ರ್, ಗುತ್ತಿಗೆದಾರರಾದ ಲಕ್ಷ್ಮೀನಾರಾಯಣ ಉಪಾಧ್ಯಾಯ, ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಬೊಮ್ಮೆಟ್ಟಿ ವೇದಿಕೆಯಲ್ಲಿ ಇದ್ದರು.4 ಕೊಠಡಿ ನಿರ್ಮಾಣಕ್ಕೆ ಸಹಕರಿಸುತ್ತಿರುವವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕ ಡಾ. ಸುಂದರ ಕೇನಾಜೆಯವರು ಕಾರ್ಯಕ್ರಮ ನಿರ್ವಹಿಸಿದರು.ಸಭಾಭವನಕ್ಕೆ ಶಿಲಾನ್ಯಾಸ : ಕಾಲೇಜು ವಿಭಾಗದಲ್ಲಿ ನೂತನವಾಗಿ ಸಭಾಂಗಣ ನಿರ್ಮಾಣವಾಗಲಿದ್ದು, ಗುದ್ದಲಿ ಪೂಜೆಯನ್ನು ಶಾಸಕರು ನೆರವೇರಿಸಿದರು. ಕಾಲೇಜು ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading