ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು ಅರಂತೋಡಿನಲ್ಲಿ ನಡೆಯುತ್ತಿದೆ. ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕ ನರೇಂದ್ರ ರೈ ದೇರ್ಲ ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯ ಕ್ಷೇತ್ರದಲ್ಲಿ ಸುಳ್ಯದ ಛಾಪು ಅನನ್ಯವಾದದ್ದು. ಕನ್ನಡ ಸಾಹಿತ್ಯ ಜಗತ್ತನ್ನು ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸ ನಮ್ಮ ವಿದ್ಯಾರ್ಥಿಗಳ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಶ್ರೀಮತಿ ಲೀಲಾ ದಾಮೋದರ ಅವರು ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ಮರಣಸಂಚಿಕೆಯನ್ನು ಬಿಡುಗಡೆಗೊಳಿಸಿ, ಶುಭಹಾರೈಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಪ್ರಾಸ್ತಾವಿಕವಾಗಿ ಪ್ರಕಟಿಸಿದ್ದಾರೆ. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಆಶಯ ನುಡಿಗಳನ್ನಾಡಿದರು.ವೇದಿಕೆಯಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಕೆ.ಆರ್. ಗಂಗಾಧರ, ತಹಶೀಲ್ದಾರ್ ಶ್ರೀಮತಿ ಮಂಜುಳ, ಅರಂತೋಡು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅಡ್ತಲೆ, ನ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಸಾಹಿತ್ಯ ಸಮ್ಮೇಳನದ ಸಂಘಟಕರಾದ ಕಿಶೋರ್ ಕುಮಾರ್ ಕಿರ್ಲಾಯ, ಅಬ್ದುಲ್ಲ ಅರಂತೋಡು, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ರಾಮಚಂದ್ರ ಪಲ್ಲತ್ತಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ, ಶ್ರೀಮತಿ ಚಂದ್ರಾವತಿ ಕೆ., ದಯಾನಂದ ಆಳ್ವ, ತೇಜಸ್ವಿ ಕಡಪಳ ವೇದಿಕೆಯಲ್ಲಿ ಭಾಗವಹಿಸಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರು ಸ್ವಾಗತಿಸಿದರು. ಉಪನ್ಯಾಸಕ ಪದ್ಮಕುಮಾರ್ ಅವರು ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು. ಕಾರ್ಯಕ್ರಮದ ಮೊದಲಾಗಿ ನೆಹರೂ ಸ್ಮಾರಕ ಪದವಿಪೂರ್ವ ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತಗೀತೆ ನಡೆಯಿತು. ಉಪನ್ಯಾಸಕ ಮೋಹನಚಂದ್ರ ಕಾರ್ಯಕ್ರಮ ನಿರೂಪಿಸಿದರು.