ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಡೆಕೋಲು ಗ್ರಾಮದ ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿ.1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ ಎಂದು ನ.23ರಂದು ಪ್ರತಿಕಾಗೋಷ್ಠಿ ನಡೆಸಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ವಿವರಿಸಿದರು. ಬೆಳಗ್ಗೆ 9.00 ಗಂಟೆಗೆ ಫಾರೆಸ್ಟ್ ಬಂಗಲೆ ಬಳಿಯಿಂದ ಮೆರವಣಿಗೆ ಹೊರಡಲಿದ್ದು, ಇದಕ್ಕೆ ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷರಾದ ಜಾಕೆ ಸದಾನಂದ ಗೌಡ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಮಂಡೆಕೋಲು ಗ್ರಾಮ ಪಂಚಾಯತ್ ಅದ್ಯಕ್ಷರಾದ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರಾಮಕೃಷ್ಣ ರೈ, ಮಂಡೆಕೋಲು ಯಾದವ ಚಾರಿಟೇಬರ್ ಟ್ರಸ್ಟಿನ ಅಧ್ಯಕ್ಷರಾದ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ., ಮಂಡೆಕೋಲು ಗ್ರಾಮ ಗಔಡ ಸಮಿತಿಯ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್ ಸುರೇಶ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಸೈಂಟ್ ಅಲೋಷಿಯಸ್ ಕಾಲೇಜಿನ ಪ್ರಾಧ್ಯಪಕರಾಗಿರುವ ಡಾ ವಿಶ್ವನಾಥ ಬದಿಕಾನ ಇವರು ಅರೆಭಾಷೆ ಸಂಸ್ಕೃತಿನ ಉಳ್ಸಿ, ಸಾಹಿತ್ಯನ ಬೆಳ್ಸುವ ಕಾರ್ಯ’ ಕುರಿತು ಉಪನ್ಯಾಸ ನೀಡಲಿದ್ದಾರೆ. ಅಕಾಡೆಮಿ ಪ್ರಕಟಿಸಿ ಪುಸ್ತಕಗಳ ಕುರಿತು ಅವಲೋಕನ ಕಾರ್ಯಕ್ರಮವಿದ್ದು, ಇದರಲ್ಲಿ ಸಂಗೀತಾ ರವಿರಾಜ್ ಹೊಸೂರು, ಲೀಲಾ ದಾಮೋದರ, ಯೋಗೀಶ್ ಹೊಸೋಳಿಕೆ, ಹಾಗೂ ಹೇಮಲತಾ ಗಣೇಶ್ ಕಜೆಗದ್ದೆ ಭಾಗಹಿಸಲಿದ್ದಾರೆ. ಮಧ್ಯಾಹ್ನ ಸ್ಥಳೀಯ ಕಲಾವಿದರಿಂದ ಮತ್ತು ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದಿAದ ವೈವಿಧ್ಯಮಯ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಗಾಯಕರಾದ ಕೆ.ಆರ್ ಗೋಪಾಲಕೃಷ್ಣ ಬಳಗದಿಂದ ಗೀತಾಗಾಯನ ಕಾರ್ಯಕ್ರಮ ಇರಲಿದೆ. ಅಪರಾಹ್ನ ಸಮಾರೋಪ ಸಮಾರಂಭ, ಸನ್ಮಾನ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್‌ಯವರು ಉಪಸ್ಥಿತಿ ಇರಲಿದೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಡಿ.ವಿ ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ವಹಿಸಲಿದ್ದಾರೆ. ಶಾಸಕರಾದ ಭಾಗೀರಥಿ ಮುರುಳ್ಯ, ಸಂಸದರಾದ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ| ಡಿ ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಬಿ.ಆರ್, ಎಸ್.ಎಲ್ ಬೋಜೆಗೌಡ, ಐವನ್ ಡಿ’ಸೋಜ, ಕೆ.ಪ್ರತಾಪ್ ಸಿಂಹ ನಾಯಕ್, ಡಾ| ಧನಂಜಯ ಸರ್ಜಿ, ಸುಳ್ಯ ತಹಶೀಲ್ದಾರ್ ಮಂಜುಳಾ ಎಂ, ದ.ಕ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ದ.ಕ ಜಿಲ್ಲಾ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ, ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ ಜಯರಾಮ್ ಹಾಗೂ ಲಕ್ಷಿö್ಮÃನಾರಾಯಣ ಕಜೆಗದ್ದೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ.ಬಿ ಸದಾಶಿವ ಅವರು ಸಮಾರೋಪ ಮಾತುಗಳನ್ನಾಡಲಿದ್ದಾರೆ. ಪ್ರದೇಶದ ಹಿರಿಯ ಅರೆಭಾಷಿಕ ದಂಪತಿ, ಕೃಷಿ ಹಾಗೂ ಹೈನುಗಾರಿಕಾ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಸಹಕಾರ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಸದಸ್ಯರಾದ ಲತಾ ಪ್ರಸಾದ್ ಕುದ್ಪಾಜೆ, ವಿನೋದ್ ಮೂಡಗದ್ದೆ ಪ್ರಚಾರ ಸಮಿತಿ ಸಂಚಾಲಕ ಜಯರಾಜ್ ಕುಕ್ಕೇಟಿ, ಗ್ರಾಮ ಗೌಡ ಸಮಿತಿ ಕಾರ್ಯದರ್ಶಿ ದಾಮೋದರ ಮಿತ್ತಪೇರಾಲು ಉಪಸ್ಥಿತರಿದ್ದರು.
- Saturday
- November 23rd, 2024