ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಬೆಳ್ಳಾರೆ ವಲಯದ 350 ನೇ ಸ್ವಸಹಾಯ ಸಂಘವನ್ನು ಐವರ್ನಾಡಿನಲ್ಲಿ ರಚನೆ ಮಾಡಲಾಯಿತು. ನೂತನವಾಗಿ ರಚನೆಯಾದ ನೇಸರ ಸ್ವಸಹಾಯ ಸಂಘವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಚಂದ್ರಲಿಂಗಂ ಬೇಂಗಮಲೆ ಅವರು ಉದ್ಘಾಟಿಸಿದರು. ಯೋಜನಾಧಿಕಾರಿ ಅವರು ಸ್ವಸಹಾಯ ಸಂಘದ ನಿಯಮವಳಿಗಳ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿ ದಾಖಲಾತಿ ಹಸ್ತತಂತರ ಮಾಡಿದರು ವಲಯ ಅಧ್ಯಕ್ಷರಾದ ವೇದ ಹೆಚ್. ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ರಶ್ಮಿತಾ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
- Wednesday
- December 4th, 2024