ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಈ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಸಂಘಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಡಿ.07 ರಂದು ಬಾಳುಗೋಡಿನ ವಿಶ್ವ ಯುವಕ ಮಂಡಲದ ಸುಮಾರು 53 ಸದಸ್ಯರು ಶ್ರೀ ದೇವರ ಅನ್ನ ಪ್ರಸಾದ ವಿತರಣೆಯ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಪದಾಧಿಕಾರಿಗಳು ಸೇರಿದಂತೆ ಹಿರಿಯ ಕಿರಿಯ ಸದಸ್ಯರು ಉಪಸ್ಥಿತರಿದ್ದರು.
- Thursday
- December 12th, 2024