ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು ವಿವಿಧ ಕಾರಣಗಳಿಂದಾಗಿ ಈ ಯೋಜನೆಯಿಂದ ಕೆಲವು ಅರ್ಹ ಪಲಾನುಭವಿಗಳು ವಂಚಿತರಾಗಿದ್ದು ಈ ಬಗ್ಗೆ ಅರ್ಹ ಪಲಾನುಭವಿಗಳನ್ನು ಹಾಗೂ ತಿರಸ್ಕೃತಗೊಂಡ ಪಲಾನುಭವಿಗಳನ್ನು ಗುರುತಿಸಿ, ಪರಿಶೀಲನೆ ನಡೆಸಿ ಅರ್ಹ ಪಲಾನುಭವಿಗಳಿಗೆ ಯೋಜನೆಗಳನ್ನು ದೊರಕುವಂತೆ ಮಾಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಉಸ್ತುವಾರಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಮ್ಮಿಕೊಂಡ ವಿಲೇವಾರಿ ಶಿಬಿರ ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಯವರು ದೀಪ ಬೆಳಗಿಸಿ ಶಿಬಿರದ ಅಭಿಯಾನ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಭರತ್ ಮುಂಡೋಡಿ ಮಾತನಾಡಿ ಅರ್ಹ ಪಲಾನುಭವಿಗಳಿಗೆ ಮತ್ತು ಕೆಲವು ಕಾರಣಗಳಿಂದ ಗ್ಯಾರಂಟಿ ವಂಚಿತರಾಗಿರುವ ಪಲಾನುಭವಿಗಳಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಶಿಬಿರ ಆಯೋಜಿಸಿ ಅರ್ಜಿ ವಿಲೇವಾರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ ಇದು ರಾಜ್ಯದಲ್ಲೇ ಪ್ರಥಮ ಹೆಜ್ಜೆಯಾಗಿದೆ. ಈ ಶಿಬಿರಗಳ ಮೂಲಕ ರಾಜ್ಯ ಸರಕಾರದ ಗ್ಯಾರಂಟಿ ಸಂಪೂರ್ಣ ಅನುಷ್ಠಾನವಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹನಾಧಿಕಾರಿ ರಾಜಣ್ಣ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸದಸ್ಯರಾದ ಭವಾನಿಶಂಕರ್ ಕಲ್ಮಡ್ಕ, ರಾಜು ನೆಲ್ಲಿಕುಮೇರಿ, ಲತೀಫ್ ಅಡ್ಕಾರು, ಧನುಷ್ ಕುಕ್ಕೇಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ವೊಲ್ಗ ಡಿಸೋಜ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಮಹಮ್ಮದ್ ಕುಂಹಿ ಗೂನಡ್ಕ, ಜಿ ಕೆ ಹಮೀದ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಸದಸ್ಯರಾದ ಶವಾದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಪ್ರಮುಖರಾದ ಕೆ ಪಿ ಜಾನಿ, ಚೇತನ್ ಕಜೆಗದ್ದೆ, ಗೋಕುಲ್ ದಾಸ್ ಸುಳ್ಯ, ವಸಂತ ಪೆಲ್ತಡ್ಕ, ಸೇರಿದಂತೆ ಪಲಾನುಭವಿಗಳು, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ವೊಲ್ಗ ಡಿಸೋಜ ಸ್ವಾಗತಿಸಿ, ಉಪಾಧ್ಯಕ್ಷ ಎಸ್ ಕೆ ಹನೀಫ್ ವಂದಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಕಾಂತಿ ಮೋಹನ್ ಕಾರ್ಯಕ್ರಮ ನಿರೂಪಿಸಿದರು.
- Thursday
- December 12th, 2024