ಕಲ್ಮಕಾರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಯ್ಯಪ್ಪ ವೃತಧಾರಿ ಗಂಭೀರವಾಗಿ ಗಾಯಗೊಂಡ ಘಟನೆ ಡಿ. 17ರ ಮುಂಜಾನೆ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಕಲ್ಮಕಾರು ಗ್ರಾಮದ ಚರಿತ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಆನೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.
ಅಯ್ಯಪ್ಪ ವೃತಧಾರಿ ಚರಿತ್ ಗೆ ಗಂಭೀರ ಗಾಯಗಳಾಗಿದ್ದು, ಸುಳ್ಯದ ಆಸ್ಪತ್ರೆಗೆ ದಾಖಲಾಗಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ದೌಡಾಯಿಸಿದ್ದಾರೆ.