ಆರಿಕೋಡಿ ಚಾಮುಂಡೇಶ್ವರಿ ಧರ್ಮದರ್ಶಿಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ, ಭಕ್ತಿಯಿಂದ ಆಮಂತ್ರಣವಿತ್ತು ಆಶೀರ್ವಾದ ಬೇಡಿದ ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿಯವರು ಆಶೀರ್ವಾದ ಪಡೆದರು.
ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಭಕ್ತಿ ಕೇಂದ್ರವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಡಾ. ಕೆ.ವಿ ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ. ಡಿ.25ರಂದು ಸುಳ್ಯದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗಣ್ಯರಿಗೆ ಕೊಡುವ ಕಾರ್ಯ ನಡೆಯುತ್ತಿದೆ. ಅಂತೆಯೇ ತುಳುನಾಡಿನ ಭಕ್ತಿ ಕೇಂದ್ರಗಳಲ್ಲಿ ಒಂದಾಗಿರುವ ಆರಿಕೋಡಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಯ ಧರ್ಮದರ್ಶಿ ಹರೀಶ್ ಆರಿಕೋಡಿ ಅವರಿಗೂ ಆಮಂತ್ರಣ ಪತ್ರಿಕೆಯನ್ನು ಬುಧವಾರ ನೀಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ರಥೋತ್ಸವ ಸಮಿತಿಯ ಸದಸ್ಯರು ಹಾಜರಿದ್ದರು.