
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಕಡಬ ತಾಲೂಕು ಬಲ್ಯ ಗ್ರಾಮದ ಹೊಸಮಠದಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಕೃಷ್ಣ ಎಂ.ಆರ್. ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಸುಳ್ಯ ನಗರದ ಸುನಿಲ್ ಕೇರ್ಪಳ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ ಹಾಗೂ ಸುಬೋಧ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.

