ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ದ.ಕ.ಜಿ.ಪಂ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.23 ರಂದು ಶಾಲೆಯ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. 4ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನೆರವೇರಿಸಿದರು. ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹನೀಫ್.ಎಸ್.ವಿ ರವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ಯಾನಲ್ ವಕೀಲರಾದ ಚರಣ್ ಕಾಯರ ರವರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ/ಪ್ಯಾನಲ್ ವಕೀಲರಾದ ಬಿ.ಪುಷ್ಪರಾಜ್ ಗಾಂಭೀರ ದೇಶಕೋಡಿಗುತ್ತು ರವರು ಸಂವಿಧಾನದಲ್ಲಿ ಶಿಕ್ಷಣದ ಮಹತ್ವವನ್ನು ಸುದೀರ್ಘವಾಗಿ ಮಕ್ಕಳಿಗೆ ಮನದಟ್ಟಾಗುವಂತೆ ವಿವರಿಸಿದರು.
ಈ ಸಂದರ್ಭದಲ್ಲಿ ಅಧ್ಯಾಪಕ ವೃಂದದವರು, ಶಾಲಾ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ ರವರು ಸ್ವಾಗತಿಸಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಶ್ರೀ ವಂದಿಸಿದರು. ಶಾಲೆಯ ಗೌರವ ಶಿಕ್ಷಕರಾದ ಕಮಲಾಕ್ಷ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.
- Thursday
- January 9th, 2025