ಶ್ರೀ ಅಯ್ಯಪ್ಪ ಭಜನಾ ಮಂದಿರ ಶಕ್ತಿನಗರ ಕಲ್ಮಕಾರು ಇದರ ಉಪ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ.07 ರಂದು ಅನುದಾನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಮಾಧವ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಕಲ್ಮಕಾರು ಒಕ್ಕೂಟದ ಅಧ್ಯಕ್ಷರಾದ ರಾಮಣ್ಣ ಗೌಡ ಅಂಜನಕಜೆ ಹಾಗೂ ಶೇಷಪ್ಪ ಕೊಪ್ಪಡ್ಕ, ಕೊಲ್ಲಮೊಗ್ರು ಒಕ್ಕೂಟದ ಅಧ್ಯಕ್ಷರಾದ ಹೇಮಂತ್, ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷರಾದ ಗಂಗಾಧರ ಭಟ್, ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಸತೀಶ್ ಟಿ ಎನ್, ವಲಯ ಮೇಲ್ವಿಚಾರಕರಾದ ಕೃಷ್ಣಪ್ಪ, ಸೇವಾ ಪ್ರತಿನಿಧಿ ಪದ್ಮಾವತಿ, ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ರಾಧಾಕೃಷ್ಣ ಬಿಲ್ಲಾರಮಜಲು, ಹಾಲು ಉತ್ಪಾದಕರ ಸಹಕಾರಿ ಸಂಘ ಕಲ್ಮಕಾರು ಇದರ ಕಾರ್ಯದರ್ಶಿ ಸುರೇಶ್ ಪಿ ಎಸ್, ಭಜನಾ ಮಂಡಳಿಯ ಗುರುಸ್ವಾಮಿ ಶಿವರಾಮ ಹಾಗೂ ಅಯ್ಯಪ್ಪ ವ್ರತಧಾರಿಗಳು ಉಪಸ್ಥಿತರಿದ್ದರು.
- Thursday
- January 9th, 2025