ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 15ವಿದ್ಯಾರ್ಥಿಗಳಿಗೆ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸ್ವಾಮಿ ಮತ್ತು ವಿದ್ಯಾರ್ಥಿನಿಯ ಪೋಷಕ ವಿಶ್ವನಾಥ್ ಬಹುಮಾನ ವಿತರಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ನವೋದಯ ತರಬೇತುದಾರರಾದ ರಕ್ಷಿತ್ ಪೆರುವಾಜೆ, ಗೀತಾ ಬಾಲಚಂದ್ರ, ಸುಮಿತ್ರಾ, ಕಾವ್ಯಾoಜಲಿ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಕಾರ್ಯಕ್ರಮ ನಿರ್ವಹಿಸಿದರು.
- Wednesday
- January 22nd, 2025