ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ
ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು
ಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಈ ಘಟನೆಯು ಅವರ ಮಧ್ಯೆ ಇದ್ದ ಪೂರ್ವ ವೈರಾಗ್ಯದ ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ಕೋಪದ ಭರದಲ್ಲಿ ಕೈಗೆ ಸಿಕ್ಕಿದ ಬ್ಯಾನರ್ ಅಳವಡಿಕೆಯ ರಾಡ್ ನಿಂದ ಹಲ್ಲೆ ನಡೆಸಿರುವುದಾಗಿ ಪ್ರಾಥಮಿಕವಾಗಿ ತಿಳಿದುಬಂದಿದ್ದು ಘಟನೆಯ ಕುರಿತ ಅಧಿಕೃತ ಮಾಹಿತಿ ಇನ್ನಷ್ಟೆ ಬರಬೇಕಿದೆ.