ಕುಕ್ಕೆ ಸುಬ್ರಹ್ಮಣ್ಯದ ಬೀದಿ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜಿಲ್ಲಾಧಿಕಾರಿಗಳಿಗೆ ಮತ್ತು ಪುತ್ತೂರು ಉಪ ವಿಭಾಗ ಅಧಿಕಾರಿಯೊಂದಿಗೆ ಚರ್ಚಿಸಿ, ಅತೀ ಶೀಘ್ರವಾಗಿ ಬೀದಿ ವ್ಯಾಪಾರಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಸ್ಥಳ ಗುರುತಿಸಿದ್ದು, ಹಲವು ಸಮಯದಿಂದ ಸಂಕಷ್ಟದಲ್ಲಿದ್ದ ಬೀದಿ ವ್ಯಾಪಾರಿಗಳು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.