Ad Widget

ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಏ.25 ಕೊನೆಯ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತಿದೆ..

. . . . . . . . .

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,900 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಸವಿವರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648/ 8147263422

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!