Ad Widget

ಕೊಡಗು ಜಿಲ್ಲೆ ಕೋವಿಡ್ 19 ರ ಹಿನ್ನೆಲೆಯಲ್ಲಿ ಮೃತಪಟ್ಟವರ ಸಂಖ್ಯೆ 10 ಕ್ಕೆ ಏರಿಕೆ


ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10 ಕ್ಕೇರಿದೆ.
ಮಡಿಕೇರಿ ನಗರ ಮಹದೇವಪೇಟೆ ಬಳಿಯ ಅಬ್ದುಲ್ ಕಲಾಂ ಲೇ ಔಟ್ ನ ನಿವಾಸಿ, 64 ವರ್ಷದ ಪುರುಷರೊಬ್ಬರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಅವರಲ್ಲಿ ಕೆಮ್ಮು ಕಾಣಿಸಿಕೊಂಡಿರುತ್ತದೆ.
ಕೆಮ್ಮಿನ ಸಂಬಂಧ ಇವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡುವಂತೆ ಸಲಹೆ ನೀಡಿರುತ್ತಾರೆ. ಕಳೆದ ಎರಡು ದಿನಗಳಿಂದ ಇವರಿಗೆ ತುಂಬಾ ಸುಸ್ತು ಇದ್ದು, ಅದರಂತೆ ಅವರು ಆಗಸ್ಟ್ 2ರಂದು ಸಂಜೆ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿರುತ್ತಾರೆ. ಈ ಸಂದರ್ಭದಲ್ಲಿಇವರ ಗಂಟಲು/ಮೂಗು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಇವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ತಕ್ಷಣ ಚಿಕಿತ್ಸೆ ಪ್ರಾರಂಭಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ 9.30 ಗಂಟೆಗೆ ಮೃತರಾಗಿರುತ್ತಾರೆ. ಮೃತ ದೇಹದ ಅಂತ್ಯ ಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಇಂದು ನೆರವೇರಿಸಲಾಗುವುದು ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಲಭಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading