ದೇವಚಳ್ಳ ಗ್ರಾಮದ ಮುಂಡೋಡಿ ಪದ್ಮಯ್ಯ ಗೌಡ ರವರ ಹಿರಿಯ ಮಗನಾದ ಮುಂಡೋಡಿ ಶಿವಾನಂದ ಗೌಡ ರವರು ಜ.19 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ 76 ವರ್ಷ ವಯಸ್ಸಾಗಿತ್ತು. 1984 ರಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ತಮ್ಮ ವೃತ್ತಿಯನ್ನು ಆರಂಭಿಸಿದ ಇವರು ಮೈಸೂರು, ಕಾರ್ಕಳ ಹಾಗೂ ಮಂಗಳೂರು ಕ್ಷೇತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದು, ಇವರು ಕೆ.ಇ.ಬಿ ಯಲ್ಲಿ ಕಾನೂನು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಮಂಗಳೂರಿನಲ್ಲಿ ಸಹಾಯಕ ಅಭಿಯೋಜಕ ನಿರ್ದೇಶಕರಾಗಿ ತಮ್ಮ ಸೇವೆಯಿಂದ ನಿವೃತ್ತರಾದರು.
ಮೃತರು ಪತ್ನಿ ಶ್ರೀಮತಿ ಶಾಂತಿ, ಪುತ್ರಿಯರಾದ ಸೌಮ್ಯ, ಸೋನಾ, ಸ್ವಾತಿ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
- Wednesday
- January 22nd, 2025