Ad Widget

ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ.

ಸುಳ್ಯ: ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ ನೀಡಲಾಗಿದೆ .

. . . . . . . . .

ಆದೇಶದಲ್ಲೇನಿದೆ ಗೊತ್ತಾ.

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ ,ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ, ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ ಸಂಬಂಧ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬಗರ್ ಹುಕುಂ ,Land Beat App ,ದರಖಾಸ್ತು ಪೋಡಿಯ 1 to 5 ಪ್ರಕರಣಗಳು / Adhar Seeding / ಕಂದಾಯ ಇಲಾಖೆಯ ಕಡತಗಳ ಗಣಕೀಕರಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಕೊರತೆಯಿಂದಾಗಿ ಹಾಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹೆಚ್ಚಿನ ಕಾರ್ಯದೊತ್ತಡ ಉಂಟಾಗುತ್ತಿರುತ್ತದೆ.

ಆದುದರಿಂದ ಪ್ರಾದೇಶಿಕ ಆಯುಕ್ತರ ,ಜಿಲ್ಲಾಧಿಕಾರಿಗಳ ,ಉಪವಿಭಾಗಾಧಿಕಾರಿ , ತಹಶೀಲ್ದಾರ್ ಕಛೇರಿಗಳಲ್ಲಿ ನಿಯೋಜನೆ ,ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿರವರುಗಳನ್ನು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿ ಬಿಡುಗಡೆ ಮಾಡುವಂತೆ ಸೂಚಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದ್ದು ಇದರಂತೆ ಸುಳ್ಯ ತಾಲೂಕಿನ ನಾಲ್ವರು ಗ್ರಾಮ ಆಡಳಿತ ಅಧಿಕಾರಿಗಳು ಸಹಾಯಕ ಆಯುಕ್ತರ ಕಛೇರಿ ಮತ್ತು ತಹಶೀಲ್ದಾರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವವರಹ ಮೂಲಸ್ಥಾನದಲ್ಲಿ ಕರ್ತವ್ಯಕ್ಕೆ ಬಿಡುಗಡೆ ಗೊಳ್ಳಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!