
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 05 ವರ್ಷಗಳ ಆಡಳಿತ ಮಂಡಳಿ ಅವಧಿಗೆ ಜ.19 ರಂದು ಚುನಾವಣೆ ನಡೆದು ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು, ಈ ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟು ಫಲಿತಾಂಶವನ್ನು ಘೋಷಣೆ ಮಾಡಬೇಕಾಗಿರುವುದರಿಂದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯು ಮುಕ್ತಾಯವಾಗಿರುವುದರಿಂದ ಸಂಘದ ದೈನಂದಿನ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಆಡಳಿತ ಮಂಡಳಿ ಸ್ಥಾನದಲ್ಲಿ ವಿಶೇಷ ಅಧಿಕಾರಿಯನ್ನು ನೇಮಿಸಲಾಗಿದ್ದು, ವಿಶೇಷ ಅಧಿಕಾರಿಯಾಗಿ ಮನೋಜ್ ಮಾಣಿಬೈಲು ರವರು ಜ.23 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಮನೋಜ್ ರವರು ಡಿ.ಸಿ.ಸಿ ಬ್ಯಾಂಕ್ ನ ಪ್ರತಿನಿಧಿಯಾಗಿದ್ದು, ಗುತ್ತಿಗಾರು ವಲಯ ಮೇಲ್ವಿಚಾರಕರಾಗಿರುತ್ತಾರೆ. ಇಲಾಖೆಯ ಆದೇಶದಂತೆ ಈ ಜವಾಬ್ದಾರಿಯನ್ನು ವಹಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)