
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು, ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಮತ್ತು ಪೋಷಕರು ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಸ್ವಾಗತಿಸಿ ವಂದಿಸಿದರು
