
ದೊಡ್ಡೇರಿ ಸ.ಕಿ.ಪ್ರಾ. ಶಾಲೆಯ ನವೀಕೃತ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಫೆ.03 ರಂದು ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಕಿ ಕಾಟಿಪಳ್ಳ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯವತಿ, ರತ್ನಾವತಿ, ಪ್ರಮುಖರಾದ ಚಂದ್ರಶೇಖರ ಕೋಣಗುಂಡಿ, ಚಂದ್ರಶೇಖರ.ಡಿ.ಕೆ, ವಾಸುದೇವ ನಾಯ್ಕ್, ಅಂಗನವಾಡಿ ಕಾರ್ಯಕರ್ತೆ ಉಷಾ, ಶಿಕ್ಷಣ ಸಂಯೋಜಕರಾದ ಧನಲಕ್ಷ್ಮೀ ಕುದ್ಪಾಜೆ, ರೇವತಿ ರಾಧಾಕೃಷ್ಣ, ಕಲಾವತಿ ದೊಡ್ಡೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸದಾನಂದ.ಡಿ.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಜಗದೀಶ್ ದೊಡ್ಡೇರಿ ಸ್ವಾಗತಿಸಿ ಮುಖ್ಯ ಶಿಕ್ಷಕರಾದ ಕೃಷ್ಣಾನಂತ ಸರಳಾಯ ಧನ್ಯವಾದ ಸಮರ್ಪಿಸಿದರು. ಅತಿಥಿ ಶಿಕ್ಷಕರಾದ ಭುವನ್.ಕೆ ಕಾರ್ಯಕ್ರಮ ನಿರೂಪಿಸಿದರು.
