Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಶಾಲೆಗೆ ದತ್ತಿನಿಧಿ ಕೊಡುಗೆ

ಸುಬ್ರಹ್ಮಣ್ಯ ಫೆ 05 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ವಿದ್ಯಾರ್ಜನೆಯಲ್ಲಿ ಅತ್ಯುನ್ನತ ಅಂಕ ಪಡೆದವರಿಗೆ ರೂ.10000 ದತ್ತಿ ನಿಧಿಯನ್ನು ನೀಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ದತ್ತಿ ನಿಧಿಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಮೂಕಮಲೆ ಅವರಿಗೆ ಹಸ್ತಾಂತರಿಸಿದರು. ಮುಖ್ಯ ಅತಿಥಿಗಳಾಗಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ,ಪೂರ್ವಾಧ್ಯಕ್ಷರುಗಳಾದ ಗೋಪಾಲ ಎಣ್ಣೆ ಮಜಲ್, ಮಾಯಿಲಪ್ಪ ಸಂಕೇಶ ,ಜೊತೆ ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ದವರು ವಿದ್ಯಾರ್ಥಿಗಳು ಹಾಜರಿದ್ದರು. ಗೋಪಾಲ್ ಎಣ್ಣೆ ಮಜಲು ನಿರೂಪಿಸಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ನಾಯರ್ ಸ್ವಾಗತಿಸಿ ಭವಾನಿ ಶಂಕರ ಪೈಲಾಜೆ ಧನ್ಯವಾದ ಸಮರ್ಪಿಸಿದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!