
ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತಿದ್ದು ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವವು ಸಹಸ್ರ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಡಗರದಿಂದ ಜರುಗಿತು. ಹಾಗೂ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ,ಶಯನೋತ್ಸವ, ಕವಾಟ ಬಂಧನ ಜರುಗಿತು. ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆದು ಶ್ರೀ ದೇವರ ಬ್ರಹ್ಮ ರಥೋತ್ಸವ ಜರುಗಿತು. .
ಆಲರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ಭಜನಾ ತಂಡಗಳಿಂದ ಕುಣಿತ ಭಜನೆ, ಗೊಂಬೆಗಳು ಹಾಗೂ ಚೆಂಡೆ ವಾದನ ಭಕ್ತರ ಮನರಂಜಿಸಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಯ ಪದಾಧಿಕಾರಿಗಳು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.