
ಜೇಸಿಐ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ, ಗ್ರಾಮ ಪಂಚಾಯತ್ ಬೆಳ್ಳಾರೆ ಮತ್ತು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೆಳ್ಳಾರೆ ವಲಯದ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಪೇಟೆ ಸವಾರಿಯ ದಿನ ಪೇಟೆ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಜೇಸಿಐ ಸದಸ್ಯರು, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಗ್ರಾಮ ಪಂಚಾಯತ್ ಸಿಬ್ಬಂಗಳು ಮತ್ತು ಓಡಿಯೂರು ಶ್ರೀ ಗ್ರಾಮ ವಿಕಾಸ ಸಮಿತಿ ಸದಸ್ಯರು ಹಾಗೂ ಮೇಲ್ವಿಚಾರಕರು ದೇವಸ್ಥಾನದಿಂದ ಮಾಸ್ತಿಕಟ್ಟೆಯವರೆಗೆ ನಡೆದ ಪೇಟೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
