
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಫೆ.26 ರಂದು ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:30 ರವರೆಗೆ ಗುತ್ತಿಗಾರು ಪ.ವರ್ಗದ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದ್ದು, ರಕ್ತದಾನ ಮಾಡಲಿಚ್ಛಿಸುವ ಆಸಕ್ತ ರಕ್ತದಾನಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ 9480199711 ಸಂಪರ್ಕಿಸಬಹುದಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)