
ಅಂಗನವಾಡಿ ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಯೋಜನೆ ಅನುಷ್ಠಾನದಲ್ಲಿ ಮಹಿಳೆಯರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯ ಎಂದರು.
,ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸ್ನೇಹಶ್ರೀ ಮಹಿಳಾ ಮಂಡಲ ಅಧ್ಯಕ್ಷೆ ಪೂರ್ಣಿಮಾ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಬಿ. ಯು ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.