
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮ ಅಂಗವಾಗಿ ನಡೆದ ದಶ ಕಾರ್ಯಕ್ರಮಗಳು, ಮಹಿಳಾ ಓದುಗರೊಂದಿಗೆ ಒಂದು ದಿನ, ಮಹಿಳಾ ಸಾಹಿತಿಗಳೊಂದಿಗೆ ಸಂವಾದ ಮತ್ತು ಸುಳ್ಯ ತಾಲೂಕಿನ ಮಹಿಳಾ ಸಾಹಿತಿಗಳ ಪರಿಚಯ ಕಾರ್ಯಕ್ರಮ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಮಾ.3ರಂದು ನಡೆಯಿತು. ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ, ಬರಹಗಾರರಾದ ಅಶ್ವಿನಿ ಕೋಡಿಬೈಲು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಬೆಳ್ಳಾರೆ ಜ್ಞಾನದೀಪ ಮೋoಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಶಿಕ್ಷಕಿ ಗೀತಾ ಬಾಲಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು. ಸ್ನೇಹಶ್ರೀ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯೆ ಇಂದಿರಾ ಸ್ವಾಗತಿಸಿ, ಗ್ರಂಥಾಲಯ ಮೇಲ್ವಿಚಾರಕಿ ಶಶಿಕಲಾ ವಂದಿಸಿದರು. ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯೆ ಭಾರತಿ ಕಾರ್ಯಕ್ರಮ ನಿರೂಪಿಸಿದರು